ಕೂಡಿಗೆ, ಅ. 2: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಕಾಮಗಾರಿಗಳು, ಗ್ರಾಮ ವ್ಯಾಪ್ತಿಯ ರೈತರಿಗೆ ನೀಡಲಾದ ದನದ ಕೊಟ್ಟಿಗೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆದವು. ನೋಡೆಲ್ ಅಧಿಕಾರಿ ಡಾ. ಎಸ್.ಎಸ್. ಆನಂದ್ ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಿದರು.

ಈ ಸಂದರ್ಭ ಮಹಾತ್ಮಾ ಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯ ಲೆಕ್ಕ ಪರಿಶೋಧಕ ಪ್ರೀತಂ ಪೆÇನ್ನಪ್ಪ ಮಾತನಾಡಿ, ಸಭೆಗೆ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಮತ್ತು ಅದನ್ನು ಸದುಪಯೋಗಡಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವಂತೆ ಈ ಬಾರಿಯೂ ಉದ್ಯೋಗ ಖಾತ್ರಿ ಯೋಜನೆಗೆ ಗ್ರಾಮಸ್ಥರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಗ್ರಾಮಗಳ ಉಪರಸ್ತೆಗಳ ಕಾಮಗಾರಿ, ಶಾಲೆಯ ತಡೆಗೋಡೆ ಸೇರಿದಂತೆ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ಸಹಕರಿಸಬೇಕು ಎಂದರು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ಕುಮಾರ್, ಸದಸ್ಯರುಗಳಾದ ಕೆ.ವೈ. ರವಿ, ರಾಮಚಂದ್ರ, ಕೃಷ್ಣ, ಹೆಚ್.ಎಸ್. ರವಿ, ಪುಷ್ಪಾ, ಕಲ್ಪನಾ, ರತ್ನಮ್ಮ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.