ಮಡಿಕೇರಿ, ಅ. 2: ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ಯೂತ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಲ್ಪಟ್ಟಿತ್ತು. ರೆಡ್ ಕ್ರಾಸ್ ಕೊಡಗು ಘಟಕದ ಸಭಾಧ್ಯಕ್ಷ ಬಿ.ಕೆ. ರವೀಂದ್ರ ರೈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕರ್ನಾಟಕ ರೆಡ್ ಕ್ರಾಸ್‍ನ ಉಪಾಧ್ಯಕ್ಷ ಡಾ. ಕುಮಾರ್ ಎಸ್.ಎಲ್.ವಿ. ಪ್ರಥಮ ಚಿಕಿತ್ಸೆ ಸಂಬಂಧಿತ 3 ಗಂಟೆಗಳ ಕಾಲ ಪ್ರಾತ್ಯಕ್ಷಿಕೆಯೊಂದಿಗೆ ವೈದ್ಯಕೀಯ ಕಾಲೇಜಿನ ಯೂತ್ ರೆಡ್ ಕ್ರಾಸ್‍ನ 100 ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವೈದ್ಯಕೀಯ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನಿರ್ವಹಿಸಿದ್ದ ಕಾರ್ಯಾಗಾರದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಎಚ್.ಎಸ್. ಮುರಳಿ, ಯೂತ್ ರೆಡ್ ಕ್ರಾಸ್ ಜಿಲ್ಲಾ ನಿರ್ದೇಶಕ ಎಂ. ಧನಂಜಯ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೇರಿ ನಾಣಯ್ಯ, ನಿರ್ದೇಶಕಿ ಡಾ. ವೀಣಾ, ಯೂತ್ ರೆಡ್ ಕ್ರಾಸ್ ಉಪಾಧ್ಯಕ್ಷೆ ಚಂದನ್, ಕಾರ್ಯದರ್ಶಿ ಅನುಶ್ರೀ ಪಾಲ್ಗೊಂಡಿದ್ದರು. ಕಾಲೇಜಿನ ವಿದ್ಯಾರ್ಥಿಗಳಾದ ಅನನ್ಯ ಸ್ವಾಗತಿಸಿ, ದೇವಾ ವಂದಿಸಿದರು.