ಗುಡ್ಡೆಹೊಸೂರು, ಅ. 2: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಶ್ರೀ ಮೊರಾರ್ಜಿ ದೇಶಾಯಿ ವಸತಿ ಶಾಲೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಶಾಲಾ ಮಕ್ಕಳು ಮತ್ತು ಪೋಷಕರು ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಯಿತು.

ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಮತ್ತು ಸಹ ಶಿಕ್ಷಕ ವೃಂದದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಅನೇಕ ವರ್ಷಗಳಿಂದ ಈ ಶಾಲೆಯಲ್ಲಿ ಈ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕೆ.ವಿ. ಸುರೇಶ್ ಆಗಮಿಸಿದ ದಿನಗಳಿಂದ ಶಾಲೆಯಲ್ಲಿ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಸುಮಾರು ಒಂದು ತಿಂಗಳ ಕಾಲ ಪೂಜಿಸಿ ನಂತರ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುತ್ತದೆ.

ವಿಸರ್ಜನಾ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಶಿಸ್ತಿನ ಸಿಪಾಯಿಗಳಂತೆ ರಸ್ತೆಯ ಒಂದು ಭಾಗದಲ್ಲಿ ಮೆರವಣಿಗೆ ಸಾಗುವ ದೃಶ್ಯ ಕಂಡುಬಂತು. ಮೆರವಣಿಗೆಯಲ್ಲಿ ವೀರಗಾಸೆ ಗುಣಿತ ಗಮನಸೆಳೆಯಿತು.

- ಗಣೇಶ್ ಕುಡೆಕ್ಕಲ್