ಮಡಿಕೇರಿ, ಅ. 2: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ ಅವರು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಐಟಿಡಿಪಿ ಅಧಿಕಾರಿ ಶಿವಕುಮಾರ್ ಅವರು ಮಾತನಾಡಿ ಕಳೆದ ವರ್ಷ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಮಾಹಿತಿ ನೀಡುತ್ತಾ ವೇದಿಕೆ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಹೀಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯ ವಿವಿಧ ಕಡೆ ಇರುವ ವಾಲ್ಮೀಕಿ ಸಮುದಾಯ ಭವನ ಸಮರ್ಪಕ ಬಳಕೆ ಬಗ್ಗೆ ಸಮಾಜದ ಮುಖಂಡರಾದ ಮಲ್ಲಪ್ಪ, ಅಶೋಕ್ ಹಾಗೂ ಕೃಷ್ಣ ಅವರು ಕೋರಿದರು. ಸಭೆಯಲ್ಲಿ ಜಿ.ಪಂ. ಸದಸ್ಯರಾದ ಪಂಕಜ, ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರೋಳಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಎಚ್. ರಾಮಚಂದ್ರ, ಜಿ.ಪಂ. ಎಂಜಿನಿಯರ್ ಪ್ರಭು, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ನಾಚಪ್ಪ, ತಾಲೂಕು ಕಾರ್ಮಿಕ ಇಲಾಖೆ ಅಧಿಕಾರಿ ಯತ್ನಟ್ಟಿ, ಎನ್‍ಐಸಿ ಅಜಿತ್ ಇತರರು ಇದ್ದರು.