ಮಡಿಕೇರಿ, ಅ. 4 : ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ತಾ. 5 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಬೆಳಿಗ್ಗೆ 10 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ‘ಅವಲೋಕನ’ ವಿಜ್ಞಾನ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 11 ಗಂಟೆಗೆ ಕತ್ತಲೆಕಾಡಿನ ಕ್ಲೋಸ್‍ಬರ್ನ್ ಶಾಲೆಗೆ ಭೇಟಿ ನೀಡಲಿದ್ದಾರೆ.
ಬಳಿಕ 11.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷಾಧಿಕಾರಿ ತಿಳಿಸಿದ್ದಾರೆ.