ಮಡಿಕೇರಿ, ಅ. 4: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಯುವ ಸ್ಪಂದನ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕ್ರೀಡಾ ಇಲಾಖೆಯ ಸಂಪನ್ಮೂಲ ವ್ಯಕ್ತಿ ಪುಟ್ಟರಾಜು ಅವರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ, ಯುವಸಬಲೀಕರಣ, ಮಾನಸಿಕ ಆರೋಗ್ಯ ಇವೇ ಮುಂತಾದ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಯುವಜನ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆಯೂ ಈ ಸಂದರ್ಭ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ತಮ್ಮ ತಮ್ಮ ಯೌವನದ ಜೀವನವನ್ನು ಮುಂದಿನ ಗುರಿಯ ಅರಿತು ಅದನ್ನು ಸಾಧಿಸುವ ನಿಟ್ಟಿನಲ್ಲಿ ಸದಾ ಪ್ರಯತ್ನಶೀಲ ರಾಗಬೇಕು ಆಗ ಮಾತ್ರ ತಮ್ಮ ಬಾಳಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಬಿ.ಆರ್. ಗಾಯತ್ರಿ ಹಾಗೂ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಮಮತಾ ಕಾಮತ್ ನಿರೂಪಿಸಿದರು. ಶಿಕ್ಷಕರಾದ ಮಂಜುನಾಥ್ ಅವರು ವಂದಿಸಿದರು.