ಕುಶಾಲನಗರ, ಅ. 4: ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಮೊರಾರ್ಜಿ ದೇಸಾಯಿ ಶಾಲಾ ಮೈದಾನದಲ್ಲಿ ಕುಶಾಲನಗರ ಕನ್ನಡ ಭಾರತಿ ಕಾಲೇಜು ಹಾಗೂ ಅರವತ್ತೊಕ್ಲು ಸರ್ವದೇವತಾ ಕಾಲೇಜು ತಂಡ ಫೈನಲ್ ಬಾಲ್ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕನ್ನಡ ಭಾರತಿ ಕಾಲೇಜು ಜಯಗಳಿಸುವ ಮೂಲಕ ಗುಲ್ಬರ್ಗದಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿದ್ದಾರೆ. ಕ್ರೀಡಾ ತಂಡದ ತರಬೇತುದಾರರಾಗಿ ದೈಹಿಕ ಶಿಕ್ಷಣ ಅಧೀಕ್ಷಕ ಚನ್ನಕೇಶವ ಮೂರ್ತಿ ತರಬೇತಿ ನೀಡುತ್ತಿದ್ದಾರೆ.