ಶ್ರೀಮಂಗಲ, ಅ. 4: ಪೊನ್ನಂಪೇಟೆ ಕೊಡವ ಸಮಾಜದ ಅಂಗ ಸಂಸ್ಥೆಯಾಗಿರುವ ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯ ಸ್ಥಾಪನೆಯಾಗಿ 25 ವರ್ಷ ಪೂರೈಸುತ್ತಿದ್ದು, ಇದೇ ನವೆಂಬರ್ 22 ರಂದು ರಜತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದ ಲಾಂಛನವನ್ನು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೇಕ್‍ಮಾಡ ರಾಜೀವ್ ಬೋಪಯ್ಯ ಮತ್ತು ಮಾಜಿ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಅವರು ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ವನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ಮಲಚೀರ ಆಶಾಗಣೇಶ್, ಉಪಾಧ್ಯಕ್ಷ ಮಂಡಚಂಡ ದಿನೇಶ್‍ಚಿಟ್ಟಿಯಪ್ಪ, ಗೌರವ ಕಾರ್ಯದರ್ಶಿ ಮೂಕಳಮಾಡ ಅರಸುನಂಜಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ಅಧ್ಯಕ್ಷರುಗಳಾದ ಆಲೇಮಾಡ ಶ್ರೀನಿವಾಸ್, ಚಿರಿಯಪಂಡ ರಾಜಾನಂಜಪ್ಪ, ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಚಿರಿಯಪಂಡ ಕಾಶಿಯಪ್ಪ, ಹಾಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಚೆಪ್ಪುಡಿರ ಬೋಪಣ್ಣ, ಗೌರವ ಕಾರ್ಯದರ್ಶಿ ಪೊನ್ನಿಮಾಡ ಸುರೇಶ್, ಜಂಟಿ ಕಾರ್ಯದರ್ಶಿ ಅಪ್ಪಂಡೇರಂಡ ಶಾರದ, ಖಜಾಂಚಿ ಮೂಕಳೇರ ಲಕ್ಷ್ಮಣ, ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ವಿದ್ಯಾಸಂಸ್ಥೆ ಮುಖ್ಯೋಪಾಧ್ಯಾಯ ಎಂ.ಸಿ. ತನುಜ ಮತ್ತಿತರರು ಹಾಜರಿದ್ದರು.