ಮಡಿಕೇರಿ, ಅ. 4: ಜಿಲ್ಲೆಯ ವಿಶ್ವಹಿಂದೂ ಪರಿಷದ್, ಬಜರಂಗದಳ ನೇತೃತ್ವದಲ್ಲಿ ತಾ.7 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಶ್ರೀ ವೀರಭದ್ರ ಮುನೇಶ್ವರ ದೇವಾಲಯದ ಆವರಣದಲ್ಲಿ ಮಾತೆಯರಿಂದ ಸಾಮೂಹಿಕ ದೀಪ ಲಕ್ಷ್ಮೀಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಭಾ ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷದ್ ದಕ್ಷಿಣ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ಬಸವರಾಜು ಬೌದ್ಧಿಕ್ ನೀಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಚಿ.ನಾ. ಸೋಮೇಶ್, ಅಧ್ಯಕ್ಷರಾಗಿ ವೀರಭದ್ರ ಮುನೇಶ್ವರ ದೇವಾಲಯದ ಅಧ್ಯಕ್ಷ ಪಿ.ಜಿ. ಸುಕುಮಾರ್, ಮುಖ್ಯ ಅತಿಥಿಗಳಾಗಿ ವಿಶ್ವಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷ ಟಾಟಾ ಬೋಪಯ್ಯ, ಕಾರ್ಯದರ್ಶಿ ನರಸಿಂಹ, ಬಜರಂಗದಳದ ಜಿಲ್ಲಾ ಸಂಯೋಜಕ ಚೇತನ್ ಉಪಸ್ಥಿತಲಿರಲಿದ್ದಾರೆ.