ಮಡಿಕೇರಿ, ಅ. 5: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆಯಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 19 ಸಹಾಯಕಿಯರನ್ನು ಗೌರವಧನ ಆಧಾರದ ಮೇಲೆ ಗುರುತಿಸಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನ ವೆಬ್‍ಸೈಟ್ ವಿಳಾಸ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ. ಞಚಿಡಿ.ಟಿiಛಿ.iಟಿ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ ದೂ. ಸಂಖ್ಯೆ 08274 249010, 249788 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.