ಮಡಿಕೇರಿ, ಅ. 6: ಬಿ. ಶೆಟ್ಟಿಗೇರಿ ಗ್ರಾ.ಪಂ. ವತಿಯಿಂದ ಬಿ. ಶೆಟ್ಟಿಗೇರಿ ಹಿರಿಯ ಪ್ರಾಥಮಿಕ ಮತ್ತು ಕುಟ್ಟಂದಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಕಡೇಮಾಡ ಅಶೋಕ್ ಚೆಟ್ಟಿಯಪ್ಪ, ಪಿಡಿಓ ತಮ್ಮಯ್ಯ, ಸದಸ್ಯ ಸಿ.ಜಿ. ಪ್ರಕಾಶ್ ಸೇರಿದಂತೆ ಸರ್ವ ಸದಸ್ಯರು ಹಾಗೂ ಆಡಳಿತ ಮಂಡಳಿಯ ಪ್ರಮುಖರು ಹಾಜರಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸ್ಥಳೀಯ ಗ್ರಾ.ಪಂ. ಸರ್ವ ವಿಧದಲ್ಲೂ ಸಹಕಾರ ನೀಡುತ್ತಿದೆ ಎಂದು ಶಿಕ್ಷಕರು ಹಾಗೂ ಎಸ್‍ಡಿಎಂಸಿ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದರು.