ಸುಂಟಿಕೊಪ್ಪ, ಅ.6: ಸುಂಟಿಕೊಪ್ಪಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದಿಂದ ಆಯುಧಪೂಜಾ ಸಮಾರಂಭ ತಾ.7ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಆಟೋಚಾಲಕರ ಸಂಘದ ಆವರಣದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಎ.ಲೋಕೇಶ್ ಕುಮಾರ್ ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಕೆ.ಪಿ.ಚಂದ್ರಕಲಾ, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಜಿ.ಪಂ.ಸದಸ್ಯ ಪಿ.ಎಂ.ಲತೀಫ್, ಗ್ರಾ.ಪಂ.ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಬಿ.ತಿಮ್ಮಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿ.ಎಂ. ಪೂವಪ್ಪ, ಮತ್ತಿತರರು ಭಾಗವಹಿಸಲಿದ್ದಾರೆ.