ವೀರಾಜಪೇಟೆ, ಅ. 6: ಇತ್ತೀಚೆಗೆ ವೀರಾಜಪೇಟೆ ತಾಲೂಕಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ. ಬಾಲಕರ ಪ್ರಾಥಮಿಕ ವಿಭಾಗದಲ್ಲಿ ಶಟಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ, ಖೋ-ಖೋ ಪ್ರಥಮ ಸ್ಥಾನ, ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನಗಳಿಸಿದ್ದಾರೆ. ಬಾಲಕಿಯರ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಪ್ರ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡು ನಂತರ ಪೊನ್ನಂಪೇಟೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಪ್ರಾಥಮಿಕ ವಿಭಾಗದಲ್ಲಿ ಶಟಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಬಾಲಕಿಯರ ಶಟಲ್ ಬ್ಯಾಡ್ಮಿಂಟನ್‍ನಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ. ದೈಹಿಕ ಶಿಕ್ಷಕರುಗಳಾದ ಸರಿತಾ ಬಿ.ಎಸ್. ಹಾಗೂ ಮಿಥುನ ಕೆ.ಜಿ. ತರಬೇತಿ ನೀಡಿರುವದಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರಮಿಳ ಎಂ.ಬಿ. ಹಾಗೂ ಪ್ರಾಥಮಿಕ ಶಾಲಾ ಸಂಯೋಜಕಿ ಜಾಯ್ಸಿ ಗಣಪತಿ ತಿಳಿಸಿದ್ದಾರೆ.