ಸುಂಟಿಕೊಪ್ಪ, ಅ. 6: ಕೊಡಗಿನ ಕ್ರೀಡಾಪಟುಗಳು ಪ್ರತಿ ವರ್ಷ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಿ ಕೊಡಗಿಗೆ ಕೀರ್ತಿ ತರುತಿದ್ದಾರೆ. ಆದರೆ ಅವರುಗಳಿಗೆ ಸೂಕ್ತ ಪ್ರೋತ್ಸಾಹ ದೊರಕುತ್ತಿಲ್ಲ ಎಂದು ಜಿ.ಪಂ.ಸದಸ್ಯೆ ಕೆ.ಪಿ.ಚಂದ್ರಕಲಾ ಹೇಳಿದರು.

ಸುಂಟಿಕೊಪ್ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಭಾಗವಹಿಸುವದು ಮುಖ್ಯ. ಸತತ ಆಭ್ಯಾಸದಿಂದ ಗೆಲವಿನ ಗುರಿ ತಲಪಬಹುದು. ಸೋಲಿನಿಂದ ಕ್ರೀಡಾಪಟುಗಳು ಧೃತಿಗೆಡಬಾರದೆಂದು ಕಿವಿ ಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆಂಚಪ್ಪ ಮಾತನಾಡಿದರು.

ಸಂತ ಮೇರಿ ಶಾಲೆಯ ವ್ಯವಸ್ಥಾಪಕರಾದ ಫಾದರ್ ಎಡ್ವರ್ಡ್ ವಿಲಿಯಂ ಸಾಲ್ಡಾನ ಅವರು ಕ್ರೀಡಾಜ್ಯೋತಿ ಬೆಳಗಿಸಿದರು.

ಕ್ರೀಡಾ ಧ್ವಜಾರೋಹಣವನ್ನು ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷೆ ರೋಜ್‍ಮೇರಿ ರಾಡ್ರಿಗಸ್ ನೆರವೇರಿಸಿದರು.

ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್ ಪ್ರಾಸ್ತಾವಿಕ ನುಡಿಯಾಡಿದರು. ಸಂತಮೇರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೆಲ್ವರಾಜ್ ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ ಮಾತನಾಡಿದರು.

ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಗ್ರಾ.ಪಂ. ಪಿಡಿಓ ವೇಣುಗೋಪಾ¯, ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಖಜಾಂಜಿ ರಮೇಶ್ ಪಿಳೈ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಸರಕಾರಿ ಪ್ರಾಥಮಿಕ ಮುಖ್ಯೋಪಾದ್ಯಾಯನಿ ಸಿ.ಎ. ಗೀತಾ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಕೆ.ಎಂ. ಭವಾನಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಉಪನ್ಯಾಸಕರ ಸಂಘದ ಅಧ್ಯಕ್ಷ ಪಿಲಿಫ್‍ವಾಸ್, ಗ್ರಾ.ಪಂ. ಸದಸ್ಯರಾದ ರಜಾಕ್, ಕೆ.ಇ. ಕರಿಂ ಉಪಸ್ಥಿತರಿದ್ದರು. ಪಥಸಂಚಲನದ ಗೌರವ ವಂದನೆಯನ್ನು ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೈ.ಎಂ.ಕರುಂಬಯ್ಯ ಸ್ವೀಕರಿಸಿದರು.

ಸುಂಟಿಕೊಪ್ಪದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ನಂದ ಅವರನ್ನು ಸನ್ಮಾನಿಸಲಾಯಿತು.

ಕೂಡಿಗೆ ಕ್ರೀಡಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಷ್ಟ್ರಮಟ್ಟದ 800 ಮೀಟರ್ ಓಟದಲ್ಲಿ ಪ್ರಥಮಸ್ಥಾನ ಪಡೆದ ಶೈಲಾ ಹಾಗೂ ರಾಷ್ಟ್ರಮಟ್ಟದಲ್ಲಿ ಪದಕ ಪಡೆದ ಸಿಂಚನ ಅವರನ್ನು ಸನ್ಮಾನಿಸಲಾಯಿತು.