ಕುಶಾಲನಗರ, ಅ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ನಾಗವಾಲ ಕೆರೆ ಅಭಿವೃದ್ಧಿ ಸಮಿತಿ, ಗಣಗೂರು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಸಮೀಪದ ಗೋಣಿಮರೂರು ಬಳಿಯ ಬಾಲ್‍ಕೆರೆಯ ಉದ್ಘಾಟನೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಗಣಗೂರು ಗ್ರಾ.ಪಂ. ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆರೆಗೆ ಬಾಗಿನ ಬಿಡುವ ಮೂಲಕ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಉದ್ಘಾಟನೆ ಮಾಡಿದರು. ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಲಹೆ, ಸೂಚನೆ ಯೊಂದಿಗೆ ರಾಜ್ಯದ ಎಲ್ಲೆಡೆ ಕೆರೆ ಪುನಶ್ಚೇತನ ಕಾರ್ಯಕ್ರಮ ನಡೆಯುತ್ತಿದ್ದು, ತಾಲೂಕಿನಲ್ಲಿ ಈಗಾಗಲೆ ಎರಡು ಕೆರೆಗಳ ಪುನಶ್ಚೇತನ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ನಡೆಸಲಾದ ಕೆರೆಯ ಸಾಮಾನ್ಯ ಕಾಮಗಾರಿಯನ್ನು ಸ್ಥಳೀಯ ಬಾಲ್‍ಕೆರೆ ಸಮಿತಿಯ ಉಸ್ತುವಾರಿಯಲ್ಲಿ ನಿರ್ವಹಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭ ಸಮಿತಿ ವತಿಯಿಂದ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸೋಮ ವಾರಪೇಟೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ರಾಜಶೇಖರ್, ಪ್ರಾಂಶುಪಾಲ ನಂಗಾರು ನಿಂಗರಾಜು, ಗ್ರಾಮದ ಮುಖಂಡರು ಡಿ.ಬಿ. ಧರ್ಮಪ್ಪ, ಜಿ.ವಿ. ನಂಜಪ್ಪ, ಜಿ.ಎಂ. ಮೋಹನಕುಮಾರಿ, ಯೋಜನೆಯ ಜಿಲ್ಲಾ ನಿರ್ದೇಶಕÀ ಡಾ. ಯೋಗೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾವೇರಿ, ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರೇವಣ್ಣ ಇದ್ದರು.
ಯೋಜನೆಯ ಕೃಷಿ ಅಧಿಕಾರಿ ಎನ್. ಗೀತಾ ಕಾರ್ಯಕ್ರಮ ನಿರೂಪಿ ಸಿದರು, ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಸ್ವಾಗತಿಸಿ, ವಂದಿಸಿದರು.