ಮಡಿಕೇರಿ: ಮಡಿಕೇರಿಯ ಶ್ರೀ ರಾಜೇಶ್ವರಿ ಪ್ರೌಢಶಾಲಾ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಿದಂತಹ ಸೈಕಲ್‍ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ರಾಜೇಶ್ವರಿ ದೇವಾಲಯದ ಧರ್ಮದರ್ಶಿ ಮತ್ತು ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗೋವಿಂದಸ್ವಾಮಿ, ಆಡಳಿತ ಮಂಡಳಿ ಸದಸ್ಯ ಅನಿಲ್ ಕೃಷ್ಣಾನೀ, ಉಪಾಧ್ಯಕ್ಷೆ ದಾಕ್ಷಾಯಿಣಿ ವಾಸುದೇವ್, ಸಂಸ್ಥೆಯ ಪ್ರಾಂಶುಪಾಲೆ ಪಿ.ಕೆ. ಮಂದಣ್ಣ, ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯ ವೆಂಕಟೇಶ್ ಪೂಜಾರಿ, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ತಾಜಿನಾ ಫಾತಿಮಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸೋಮವಾರಪೇಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಎಸ್‍ಜೆಎಂ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ವಿತರಿಸಲಾಯಿತು.

ಶಾಲಾ ಆವರಣದಲ್ಲಿ 21 ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದ ಪ.ಪಂ. ಸದಸ್ಯ ಪಿ.ಕೆ. ಚಂದ್ರು, ವಿದ್ಯಾರ್ಥಿಗಳು ಅತ್ಯಂತ ಜಾಗರೂಕತೆಯಿಂದ ಸೈಕಲ್ ಚಲಾಯಿಸಬೇಕು. ಸಂಚಾರ ನಿಯಮಗಳ ಬಗ್ಗೆ ಅರಿವು ಹೊಂದಬೇಕು ಎಂದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ರುದ್ರೇಶ್, ಸಹ ಶಿಕ್ಷಕ ಪರಮೇಶ್ವರಪ್ಪ, ರಾಣಿ ರವೀಂದ್ರ, ಕೆ.ಇ. ಬೆನ್ನೂರ, ಎಸ್.ಎಸ್. ವಿರೂಪಾಕ್ಷಯ್ಯ, ಸಿಬ್ಬಂದಿ ತೇಜಸ್ವಿನಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸವಣ್ಣ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.ನಾಪೋಕ್ಲು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 74 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಉಚಿತ ಬೈಸಿಕಲ್‍ಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ಗಳನ್ನು ವಿತರಿಸಿದ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಸದಸ್ಯ ಮಾಚೆಟ್ಟಿರ ಕುಶು ಕುಶಾಲಪ್ಪ., ಶಾಲೆಯ ಉಪಪ್ರಾಂಶುಪಾಲೆ ಪಿ.ಕೆ. ನಳಿನಿ ಹಾಗೂ ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು.ಕುಶಾಲನಗರ: ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಸಿ.ಶಿವರಾಜು ಸೈಕಲ್ ವಿತರಿಸಿದರು. ಸರಕಾರಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭ ಉಪ ಪ್ರಾಂಶುಪಾಲರಾದ ಬಿ.ಬಿ.ಸಾವಿತ್ರಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಕುಮಾರ್, ಶಿಕ್ಷಕರು, ಪೋಷಕರು ಇದ್ದರು.