ಸೋಮವಾರಪೇಟೆ, ಅ. 6: ತಾಲೂಕಿನ ಹರದೂರು ಗ್ರಾಮ ಪಂಚಾಯಿತಿ 2019-20ನೇ ಸಾಲಿನ ಗ್ರಾಮಸಭೆ ಅಧ್ಯಕ್ಷೆ ಪಿ. ಸುಮಾರವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ, ಹಸಿಕಸ ಒಣಕಸ ವಿಂಗಡಣೆ ಹಾಗೂ ವಿಲೇವಾರಿ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದಾ ಧರ್ಮಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಪಿ. ಮಣಿ, ಗ್ರಾಮ ಪಂಚಾಯಿತಿ ಸದಸ್ಯರು, ಕೃಷಿ ಇಲಾಖಾಧಿಕಾರಿ ಬೋಪಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಹಾಗೂ ವಿಜ್ಞಾನ ಪರಿಷತ್ನ ಪ್ರೇಮ್ಕುಮಾರ್ ಉಪಸ್ಥಿತರಿದ್ದರು.