ಸುಂಟಿಕೊಪ್ಪ,ಅ.4: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 49 ನೇ ಆಯುಧ ಪೂಜಾ ಸಮಾರಂಭವು ತಾ. 7 ರಂದು ಸಂಜೆ ವಾಹನ ಚಾಲಕರ ವೇದಿಕೆಯಲ್ಲಿ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ವಿಧಾನ ಪರಿಷತ್ತು ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ನೇರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಕೆ.ಪಿ.ಚಂದ್ರಕಲಾ,ಕುಮುದಾ ಧರ್ಮಪ್ಪ, ಪಿ.ಎಂ.ಲತೀಫ್, ಗ್ರಾ.ಪಂ.ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್, ಕಾಫಿ ಬೆಳೆಗಾರರಾದ ವಿನೋದ್ ಶಿವಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪೆನ್ನೇಕರ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಹಾಸನ ಗ್ರಾಹಕರ ವಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎ.ಲೋಕೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ.ಹಸೈನಾರ್, ಜಿಲ್ಲಾ ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಬೆಳೆಗಾರರಾದ ಎ.ಎಸ್.ರಾಮದಾಸ್, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಎಂ.ಶರೀಫ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್,ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ.ಶಶಿಧರ್, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ, ಬೆಳೆಗಾರÀ ಆನಂದ್ ಬಸಪ್ಪ, ಕುಶಾಲನಗರ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮೊೈದು, ಉದ್ಯಮಿ ಸಿ.ಬಿ.ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಎಸ್ಎಸ್ಎನ್ ಸದಸ್ಯ ಜರ್ಮಿಡಿಸೋಜ, ಉದ್ಯಮಿ ಟಿ.ಆರ್. ಮುನಿಯಪ್ಪನ್ ಆಗಮಿಸಲಿದ್ದಾರೆ.
ಸಂಘದ 49ನೇ ವಾರ್ಷಿಕೋತ್ಸ ವವನ್ನು ಅತಿವೃಷ್ಟಿಯಿಂದ ಆಸ್ತಿ - ಪಾಸ್ತಿ ಕಳೆದುಕೊಂಡಿರುವವರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಸರಳವಾಗಿ ಆಚರಿಸಲು ನಿರ್ಧರಿಸ ಲಾಗಿದೆ. ಯಾವದೇ ರೀತಿಯ ಆಡಂಬರ, ವಿವಿಧ ಸ್ಪರ್ಧೆಗಳು, ಮಂಟಪ ಶೋಭಾಯಾತ್ರೆ ಇರುವದಿಲ್ಲ ಬದಲಿಗೆ ಸರಳ ಆಯುಧ ಪೂಜಾ ಕಾರ್ಯಕ್ರಮಕ್ಕೆ ಸ್ಥಳೀಯ ಕಲಾವಿದರ ನೃತ್ಯ ಸಾಂಸ್ಕøತಿಕ ಕಾರ್ಯಕ್ರಮ, ಮಕ್ಕಳ ಕಲಾ ಪ್ರತಿಭೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಚಾಲಕರ ಸಂಘದ ಅಧ್ಯಕ್ಷ ಬಿ.ಎಂ.ಪೂವಪ್ಪ ತಿಳಿಸಿದ್ದಾರೆ.