ಮಡಿಕೇರಿ, ಅ. 7: ನವರಾತ್ರಿಯ 8ನೇ ದಿನ ಆಯುಧ ಪೂಜೆಯಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮಡಿಕೇರಿ ಡಿವೈಎಸ್ಪಿ ದಿನೇಶ್ ಕುಮಾರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮಡಿಕೇರಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು ಅಪರಾಧ ರಹಿತ ದಸರಾ ಆಚರಣೆಯಾಗಬೇಕು. ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದರೆ ಯಶಸ್ವಿ ದಸರಾ ಆಚರಣೆ ಸಾಧ್ಯ ಎಂದರು.

ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ ಜಗದೀಶ್, ನಗರಸಭೆ ಪೌರಾಯುಕ್ತ ಬಿ.ಎಲ್ ರಮೇಶ್, ಪೊಲೀಸ್ ನಿರೀಕ್ಷಕ ಐ.ಪಿ. ಮೇದಪ್ಪ, ದಸರಾ ಸಮಿತಿ ಗೌರವಾಧ್ಯಕ್ಷ ಟಿ.ಪಿ ರಾಜೇಂದ್ರ, ಉಪಾಧ್ಯಕ್ಷ ನೆರವಂಡ ಜೀವನ್, ಕಾರ್ಯದರ್ಶಿ ಗಜೇಂದ್ರ, ರಾಕೇಶ್, ಕ್ರೀಡಾ ಸಮಿತಿ ಅಧ್ಯಕ್ಷ ಹರೀಶ್ ಇದ್ದರು.