ಕುಶಾಲನಗರ, ಅ. 7: ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಕುಶಾಲನಗರ ಘಟಕಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕುಶಾಲನಗರ ರೋಟರಿ ಹಾಲ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ರೆಡ್‍ಕ್ರಾಸ್ ಸೊಸೈಟಿಯ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂತ್ರಸ್ತರ ನೆರವಿಗೆ ಧಾವಿಸುವ ಉದ್ದೇಶ ದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ರೆಡ್‍ಕ್ರಾಸ್‍ನಲ್ಲಿ ತೊಡಗಿಸಿಕೊಳ್ಳುವಲ್ಲಿ ಸ್ವಯಂ ಸೇವಕರು ಮುಂದಾಗಬೇಕಿದೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳು ಉಂಟಾದ ಪ್ರಕೃತಿ ವಿಕೋಪದ ಸಂದರ್ಭ ಒಟ್ಟು 45 ಲಕ್ಷ ಮೌಲ್ಯದ ಮೆಡಿಕಲ್ ಕಿಟ್ ವಿತರಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಕುಶಾಲನಗರ ನೂತನ ಘಟಕದ ಅಧ್ಯಕ್ಷ ಎಸ್.ಕೆ. ಸತೀಶ್, ಉಪಾಧ್ಯಕ್ಷ ಎಂ.ಡಿ. ರಂಗಸ್ವಾಮಿ, ಕಾರ್ಯದರ್ಶಿ ಕೆ.ಪಿ. ಚಂದ್ರಶೇಖರ್, ಉಪ ತಹಶೀಲ್ದಾರ್ ಕೆ.ಎಂ. ಚಿನ್ನಪ್ಪ, ರೋಟರಿ ಅಧ್ಯಕ್ಷ ಅಶೋಕ್ ಮತ್ತಿತರರು ಇದ್ದರು.