ಕೂಡಿಗೆ, ಅ. 9: ಮುಳ್ಳುಸೋಗೆ ಗ್ರಾ.ಪಂ ವ್ಯಾಪ್ತಿಯ 2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷ ಭವ್ಯ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಾಣ ಗೊಂಡ ಕಾಮಗಾರಿಗಳು, ಗ್ರಾಮ ವ್ಯಾಪ್ತಿಯ ರೈತರಿಗೆ ನೀಡಲಾದ ದನದ ಕೊಟ್ಟಿಗೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆದವು. ಗ್ರಾಮಸಭೆಗೆ ನೋಡಲ್ ಅಧಿಕಾರಿ ಯಾಗಿ ಆಗಮಿಸಿದ್ದ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಅವರು ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿದರು. ಲೆಕ್ಕ ಪರಿಶೋಧಕ ಹಾಗೂ ತಾಲೂಕು ಸಂಚಾಲಕ ಪ್ರೀತಂ ಪೊನ್ನಪ್ಪ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಮತ್ತು ಅದನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಭವ್ಯ ಮಾತನಾಡಿ, 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮವಾಗಿ ಕಾರ್ಯನಿರ್ವ ಹಿಸಿರುವಂತೆ ಈ ಬಾರಿಯೂ ಉದ್ಯೋಗ ಖಾತ್ರಿ ಯೋಜನೆಗೆ ಗ್ರಾಮಸ್ಥರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಗ್ರಾಮಗಳ ಉಪರಸ್ತೆಗಳ ಕಾಮಗಾರಿ, ಶಾಲೆಯ ತಡೆಗೋಡೆ ಸೇರಿದಂತೆ ಪ್ರಮುಖ ಕಾಮಗಾರಿಗಳನ್ಮು ಕೈಗೊಳ್ಳಲು ಸಹಕರಿಸಬೇಕು ಎಂದರು.

ಗ್ರಾ.ಪಂ. ಸದಸ್ಯರುಗಳಾದ ಜಗದೀಶ್, ರುದ್ರಾಂಬಿಕೆ, ಕುಮಾರ್, ಸರಸ್ವತಿ, ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸೇರಿದಂತೆ ಗ್ರಾಮಸ್ಥರು