ನಾಪೋಕ್ಲು, ಅ. 9: ಹೊದ್ದೂರು ಗ್ರಾ.ಪಂ. ವ್ಯಾಪ್ತಿಗೊಳಪಡುವ ಗ್ರಾಮಗಳ 2019-20ರ ಸಾಲಿನ ಗ್ರಾಮಸಭೆಯು ತಾ. 10ರಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷ ಕೆ.ಪಿ. ದಿನೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಬಡಕೇರಿ ದವಸಭಂಡಾರ ಕಟ್ಟಡದಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ನೋಡಲ್ ಅಧಿಕಾರಿಯಾಗಿ ಪಾಲ್ಗೊಳ್ಳುವರು.