ಸಿದ್ದಾಪುರ, ಅ. 9 : ಅಪ್ರಾಪ್ತ ಬಾಲಕಿಯೊಬ್ಬಳ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಆರೋಪಿಯೋರ್ವನಿಗೆ ಬಾಲಕಿಯ ಕುಟುಂಬಸ್ಥರು ಹಲ್ಲೆ ನಡೆಸಿದರೆಂದು ಆರೋಪಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಹಾಗೂ ಇನ್ನೋರ್ವ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಘಟನೆಯು ಚೆನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದ್ದು ಉಭಯ ಕಡೆಗಳ ಮೂವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.