*ಗೋಣಿಕೊಪ್ಪಲು, ಅ. 9: ತಿತಿಮತಿ ಅಕ್ಕಿಮಾಳ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಪೆÇೀಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.

ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮಕ್ಕೆ ತಿತಿಮತಿ ಗ್ರಾ.ಪಂ. ಸದಸ್ಯ ಸಿದ್ಧರಾಜು ಚಾಲನೆ ನೀಡಿದರು. ನಂತರ ಗರ್ಬಿಣಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾ.ಪಂ. ಸದಸ್ಯ ಎನ್.ಎನ್. ಅನೂಪ್‍ಕುಮಾರ್, ಬಿ.ಎ.ಐ.ಓ ಶಿವಯ್ಯ, ಡಾ. ಹೊಸಮನಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಜರಿದ್ದರು.