ಮಡಿಕೇರಿ, ಅ. 9: ಹೊಸ್ಕೇರಿ ಗ್ರಾಮ ಪಂಚಾಯತಿ ಹೋಬಳಿ ಮಟ್ಟದ ಅಧಿಕಾರಿಗಳ ತ್ರೈಮಾಸಿಕ ಕೆಡಿಪಿ ಸಭೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಮತಾ ಅಧ್ಯಕ್ಷತೆಯಲ್ಲಿ ನಡೆಯಿತು.

ಸರಕಾರದ ಹೊಸ ಯೋಜನೆ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯುವ ಕೆಡಿಪಿ ಸಭೆಯು ಗ್ರಾಮ ಮಟ್ಟದಲ್ಲಿ ನಡೆಯಬೇಕು ಎಂಬ ಸರಕಾರ ಆದೇಶದಂತೆ ಹೊಸ್ಕೇರಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಸಭೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಮೂರ್ತಿ ಹೊಸ ಕಾರ್ಯಕ್ರಮದ ಮಾಹಿತಿ ನೀಡಿದರು. ಈ ಸಭೆಯು ಹೋಬಳಿ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ಒಳಗೊಂಡಂತೆ ಗ್ರಾಮದ ಪ್ರಗತಿಯ ಪರಿಶೀಲನಾ ಸಭೆಯಾಗಿರುತ್ತದೆ ಎಂದರು. ಅಧ್ಯಕ್ಷೆ ಮಮತಾ ಮಾತಾನಾಡಿ, ಇಂತಹ ಸಭೆಯು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವದರಿಂದ ಗ್ರಾಮ ಸಮಸ್ಯೆಗಳು ಬಗ್ಗೆಹರಿಸಲು ಬಹಳ ಸದುಪಯೋಗ ಅಗಲಿವೆ.

ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಗ್ರಾಮಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಗೆ ಅಧಿಕಾರಿಗಳು ಬಂದು ಮಾಹಿತಿ ನೀಡಬೇಕು ಎಂದರು. ಗೈರು ಹಾಜರಾದ ಅಧಿಕಾರಿಗಳಿಗೆ ಮುಂದಿನ ಸಭೆಗೆ ಕಡ್ಡಾಯವಾಗಿ ಹಾಜರಾಗು ವಂತೆ ಪುಸ್ತಕದಲ್ಲಿ ನಮೂದಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವಂತೆ ಕ್ರಮ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.