ಚೆಟ್ಟಳ್ಳಿ, ಅ. 11: ಹಿಂದೂ ಮಲಯಾಳಿ ಸಮಾಜಂ ಇದರ ಹತ್ತನೇ ವರ್ಷದ ಓಣಂ ಆಚರಣೆ ಕಾರ್ಯಕ್ರಮ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ತಾ. 13ರಂದು (ನಾಳೆ) ನಡೆಯಲಿದೆ ಎಂದು ಮಲಯಾಳಿ ಸಮಾಜದ ಪ್ರಮುಖರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಪೂಕಳಂ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಮಾಜದ ಗೌರವಾಧ್ಯಕ್ಷ ವಿ.ಕೆ. ವಿನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ ಟಿ.ಆರ್ ವಾಸುದೇವನ್, ಪಿ.ಕಣ್ಣನ್, ಓಣಂ ಆಚರಣಾ ಸಮಿತಿ ಅಧ್ಯಕ್ಷ ಓ.ಕೆ. ಶ್ರೀನಿವಾಸ್, ಉಪಾಧ್ಯಕ್ಷೆ ಸರೋಜಿನಿ ಬಾಲನ್ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಓಣಂ ಸದ್ಯ (ಭೋಜನ) ಏರ್ಪಡಿಸಲಾಗಿದೆ.
ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಕೆ. ಶಶಿಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ಕೆ.ಎಸ್ ರಮೇಶ್, ಚೆಟ್ಟಳ್ಳಿ ಮಲಯಾಳಿ ಸಮಾಜದ ಉಪಾಧ್ಯಕ್ಷ ಎನ್. ಚಂದ್ರನ್, ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ ಮಂಜುನಾಥ್, ಚೆಟ್ಟಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ವತ್ಸಲ ಶ್ರೀಧರನ್ ಹಾಗೂ ಚೆಟ್ಟಳ್ಳಿ ಮಲಯಾಳಿ ಸಮಾಜದ ಸದಸ್ಯ ಸಿ.ಪಿ. ದಿವಾಕರನ್ ಪಾಲ್ಗೊಳ್ಳಲಿದ್ದಾರೆ
ಮಲಯಾಳಿ ಸಮಾಜದ ಸದಸ್ಯರ 10ನೇ ಹಾಗೂ 12ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.