ಕುಶಾಲನಗರ, ಅ. 13: ಕುಶಾಲನಗರ ರೋಟರಿ ಮತ್ತು ಚೆನ್ನೈ ಮಂಬಲಂ ರೋಟರಿ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಮತ್ತು ಹಾರ್ಲಿಕ್ಸ್ ವಿತರಣೆ ಕಾರ್ಯಕ್ರಮ ನಡೆಯಿತು. ಕುಶಾಲನಗರ ರೋಟರಿ ಅಧ್ಯಕ್ಷ ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆನ್ನೈ ರೋಟರಿ ಸಂಸ್ಥೆ ಅಧ್ಯಕ್ಷ ಉಮೇಶ್ ಕುಮಾರ್ ಮತ್ತು ರೋಟರಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.