ಸಿದ್ದಾಪುರ, ಅ. 13: ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕೋಳಿ ಮಾಂಸದ ಅಂಗಡಿಯನ್ನು ನಡೆಸುತ್ತಿದ್ದ ಬೀರಾನ್ ಎಂಬಾತ ಅಪ್ರಾಪ್ತ ಬಾಲಕಿಯೊರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಬಗ್ಗೆ ಪುಕಾರು ದಾಖಲಾಗಿತ್ತು. ಘಟನೆಯನ್ನು ಖಂಡಿಸಿ, ಗ್ರಾಮಸ್ಥರು ಭಾನುವಾರದಂದು ಪ್ರತಿಭಟನೆ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು, ಆರೋಪಿ ಬೀರಾನ್‍ನನ್ನು ಗ್ರಾಮದಿಂದ ಗಡಿಪಾರು ಮಾಡಬೇಕು ಹಾಗೂ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾ.ಪಂ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ, ಮಾಜಿ ತಾ.ಪಂ. ಅಧ್ಯಕ್ಷ ವಿ.ಕೆ ಲೊಕೇಶ್, ರಾಣಿ ನಾರಾಯಣ, ಗ್ರಾ.ಪಂ. ಅಧ್ಯಕ್ಷೆ ಗೀತಾ, ಸದಸ್ಯ ವಿಜು, ಗ್ರಾಮದ ಪ್ರಮುಖರಾದ ರತೀಶ್, ಯೋಗೇಶ್, ಇಂದಿರಾ, ಟಿ.ಎಸ್.ಕೆ ಉಸ್ತಾದ್ ಸೇರಿದಂತೆ ಇನ್ನಿತರರು ಇದ್ದರು. ಸಿದ್ದಾಪುರ ಠಾಣಾಧಿಕಾರಿ ದಯಾನಂದ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.