*ಗೋಣಿಕೊಪ್ಪಲು, ಅ. 13: ಅಧ್ಯಯನ ಎನ್ನುವಂತಹದ್ದು ತಪಸ್ಸಿದಂತೆ. ಅದಕ್ಕೆ ಪ್ರಶಾಂತವಾದ ವಾತಾವರಣವಿರಬೇಕು. ಅಂತಹ ವಾತಾವರಣದಲ್ಲಿ ಇರುವ ಕಾಪ್ಸ್ ವಿದ್ಯಾಸಂಸ್ಥೆ ಅಧ್ಯಯನಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದರು.

ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲೆಯ (ಕಾಪ್ಸ್) 24ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು ಯುವ ಜನಾಂಗ ತಮ್ಮ ಸಾಂಪ್ರದಾಯ ಪರಂಪರೆ ಪದ್ಧತಿಗಳನ್ನು ಬಿಡದೆ, ಹಿರಿಯರ ಮಾರ್ಗದರ್ಶನದಲ್ಲಿ ಬೆಳೆಯಬೇಕು ಎಂದು ನುಡಿದರು.

ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎಂ. ತಿಮ್ಮಯ್ಯ, ಪ್ರಾಂಶುಪಾಲ ಬೆನ್ನಿ ಕೊರಿಯಾ ಕೋಸ್ ಹಾಜರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ನೃತ್ಯ ನಾಟಕ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.