ಮಡಿಕೇರಿ, ಅ. 13: ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಅವರು ತಾ. 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಸಂಜೆ 7 ಗಂಟೆಗೆ ಮಡಿಕೇರಿಗೆ ಆಗಮಿಸಲಿದ್ದಾರೆ. ಬಳಿಕ ರಾತ್ರಿ 11.30 ಗಂಟೆಗೆ ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ.ಆನಂತರ ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋಧ್ಬವ ತುಲಾ ಸಂಕ್ರಮಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.