ಕಡಂಗ, ಅ. 13: ಕೊಡಗು ಜಿಲ್ಲಾ ಪಂಚಾಯತಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ವೀರಾಜಪೇಟೆ ಶಾಸಕ ಕೆ.ಜೆ. ಬೋಪಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಮಂತ್ರಿಸಲಾಯಿತು. ನಿಯೋಗದಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಕೊಡಗು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತು ಕೊಡಗು ಜಿಲ್ಲಾ ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೊಪ್ಪಣ್ಣ ನಿಯೋಗ ಇದ್ದರು.