ಮಡಿಕೇರಿ, ಅ. 13: ಕೂರ್ಗ್ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಮತ್ತು ಮಡಿಕೇರಿ ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ತಾ. 18 ರಿಂದ 20 ರವರೆಗೆ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಗರದ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಸೋಸಿಯೇಷನ್‍ನ ಕಾರ್ಯದರ್ಶಿ ರಚನ್ ಪೊನ್ನಪ್ಪ, ಅಂದಾಜು 100 ರಿಂದ 200 ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ತಾ. 18 ರಂದು ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿಗೆ ಚಾಲನೆ ನೀಡಲಾಗುತ್ತದೆ ಎಂದರು. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಆದಂ ಅಂಡ್ ಸನ್ಸ್ ಕುಟುಂಬದ ಪ್ರಾಯೋಜಕತ್ವದಲ್ಲಿ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.

ಆಸಕ್ತ ಸ್ಪರ್ಧಿಗಳು ತಾ. 17 ರೊಳಗಾಗಿ 9980000438, 9845606784 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದೆಂದು ತಿಳಿಸಿದರು. ಮಡಿಕೇರಿ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ ಮಾತನಾಡಿ, ಅಂತರರಾಷ್ಟ್ರೀಯ ಕ್ರೀಡೆಯಾಗಿರುವ ಟೇಬಲ್ ಟೆನ್ನಿಸ್‍ನಲ್ಲಿ ಆಸಕ್ತರಾಗಿರುವ ಜಿಲ್ಲೆಯ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು.

ಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಅಸಿಫ್, ಸದಸ್ಯರಾದ ಬಿ.ಟಿ. ಅಸ್ಲಾಂ, ಮಡಿಕೇರಿ ರೋಟರಿ ಕಾರ್ಯದರ್ಶಿ ಕೆ.ಸಿ. ಕಾರ್ಯಪ್ಪ ಹಾಗೂ ರೋಟರಿ ಯೂತ್ ಸರ್ವಿಸ್‍ನ ನಿರ್ದೇಶಕÀ ಅನಿಲ್ ಕೃಷ್ಣಾನಿ ಉಪಸ್ಥಿತರಿದ್ದರು.