ಸಿದ್ದಾಪುರ, ಅ. 13: ಪ್ರವಾಹದಿಂದ ಮನೆ ಕಳೆದುಕೊಂಡ ನೋವಿನಿಂದಾಗಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ಬೆಟ್ಟದ ಕಾಡು ನದಿ ತೀರದ ನಿವಾಸಿ ಶಂಕರ ದಾಸ್ ಎಂಬವರೆ ಆತ್ಮಹತ್ಯೆ ಮಾಡಿಕೊಂಡ ವರು. ಈ ಬಾರಿಯ ಪ್ರವಾಹಕ್ಕೆ ಸಿಲುಕಿ ಶಂಕರದಾಸ್ ಅವರ ಮನೆ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಶಂಕರದಾಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಪುತ್ರ ಸಿದ್ದಾಪುರ ಪೊಲೀಸ್ ಠಾಣೆಗೆ ಪುಕಾರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.