ಮಡಿಕೇರಿ, ಅ. 12: ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪತ್ರಿಕಾ ಭವನದ 18ನೇ ವಾರ್ಷಿಕೋತ್ಸವ ತಾ. 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನು ಶೆಣೈ, ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕರು ಹಾಗೂ ಗಾಂಧಿಪರ ಚಿಂತಕ ಡಾ. ಎಸ್. ಶಿವರಾಜಪ್ಪ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಇತರರು ಪಾಲ್ಗೊಳ್ಳಲಿದ್ದಾರೆ.