ಮಡಿಕೇರಿ, ಅ. 12: ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ- ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಸಂಬಂಧ 2019 ನೇ ಸಾಲಿನಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ hಣಣಠಿ://ತಿತಿತಿ. ತಿeಟಜಿಚಿಡಿeoಜಿಜisಚಿbಟeಜ. ಞಚಿಡಿ.ಟಿiಛಿ.iಟಿ ಅಥವಾ ತಿತಿತಿ.ಜತಿಜsಛಿ. ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ತಾ, 19 ರೊಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ ಮಡಿಕೇರಿ, ಕೊಡಗು ಜಿಲ್ಲೆಯ ವಿಶೇಷಚೇತನರ ಸಹಾಯವಾಣಿಯ ದೂರವಾಣಿ ಸಂಖ್ಯೆ: 08272-222830ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ತಿಳಿಸಿದ್ದಾರೆ.