ಗೋಣಿಕೊಪ್ಪ ವರದಿ, ಅ. 12: ವಿದ್ಯಾರ್ಥಿ ಜೀವನದಲ್ಲಿ ಶಿಬಿರಗಳಲ್ಲಿ ಹೆಚ್ಚು ತೊಡಗಿಕೊಳ್ಳುವದರಿಂದ ಸಬಲೀಕರಣಕ್ಕೆ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ ಹೇಳಿದರು.

ಬೆಕ್ಕೆಸೊಡ್ಲೂರು ಶಾರದ ಪ್ರೌಢಶಾಲೆಯಲ್ಲಿ ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನಾತ್ಮಕÀವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಬೆಳವಣಿಗೆ ಕಾಣಲು ಸಾಧ್ಯವಿದೆ ಎಂದರು.

ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಸಿ. ಡಿ. ಮಾದಪ್ಪ ಮಾತನಾಡಿ, ಪ್ರಾಮಾಣಿಕತೆಯ ಸೇವೆ ಹೆಚ್ಚು ತೃಪ್ತಿಕೊಡುತ್ತದೆ ಎಂದರು.

ಗೋಣಿಕೊಪ್ಪ ಪ್ರೆಸ್‍ಕ್ಲಬ್ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮಾತನಾಡಿ, ಗ್ರಾಮೀಣ ಅಭಿವೃದ್ಧಿಗೆ ಸ್ವಚ್ಛ ಹಾಗೂ ಮುಕ್ತ ಮನಸ್ಸಿನ ಜನಪ್ರತಿನಿಧಿಗಳ ಅವಶ್ಯಕತೆ ಅಗತ್ಯ ಎಂದರು.

ಶಾರದಾ ಪ್ರೌಢಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಮಾತನಾಡಿ, ಸ್ವಚ್ಛತೆಯೊಂದಿಗೆ ಕೃಷಿಗೆ ಮಹತ್ವ ನೀಡಲು ಯುವ ಜನತೆ ಮುಂದಾಗಬೇಕು ಎಂದರು.

ಎನ್‍ಎಸ್‍ಎಸ್ ಅಧಿಕಾರಿ ಎಸ್.ಆರ್. ತಿರುಮಲ್ಲಯ್ಯ ಪ್ರಾಸ್ತಾವಿಕ ಭಾಷಣ ಮೂಲಕ ಎನ್‍ಎಸ್‍ಎಸ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕಾನೂರು ಗ್ರಾ.ಪಂ. ಸದಸ್ಯೆ ಸುಳ್ಳಿಮಾಡ ಶಿಲ್ಪ ಅಪ್ಪಣ್ಣ ಕೊಡವ ಹಾಡಿನ ಮೂಲಕ ರಂಜಿಸಿದರು. ಪ್ರಾಂಶುಪಾಲ ಎಸ್. ಎಸ್. ಮಾದಯ್ಯ ಸ್ವಾಗತಿಸಿದರು.