ಮಡಿಕೇರಿ, ಅ. 12: 2019ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಗಣ್ಯರ ಆಯ್ಕೆಗೆ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅಧ್ಯಕ್ಷತೆಯಲ್ಲಿ 17 ಸದಸ್ಯರ ನ್ನೊಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ.

ಪ್ರತಿ ವರ್ಷ ನ.1ರಂದು ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ನಿಟ್ಟಿನಲ್ಲಿ ಅರ್ಹರನ್ನು ಆಯ್ಕೆ ಮಾಡಲು ರಚಿಸಲಾದ ಸಮಿತಿಯಲ್ಲಿ ಹಿರಿಯ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಕೂಡ ಸ್ಥಾನ ಪಡೆದಿದ್ದಾರೆ.