ಮಡಿಕೇರಿ, ಅ. 12: ಸೋಮವಾರಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಸಿ.ಆರ್. ನಾಗರಾಜಯ್ಯ ಅವರನ್ನು ಮೈಸೂರಿನ ಡಯಟ್‍ನ ಹಿರಿಯ ಉಪನ್ಯಾಸಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಕೂಡಿಗೆ ಡಯಟ್‍ನ ಹಿರಿಯ ಉಪನ್ಯಾಸಕರಾಗಿದ್ದ ಮಹದೇವ ಅವರನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ.