ವೀರಾಜಪೇಟೆ, ಅ:13 ಮಹರ್ಷಿ ವಾಲ್ಮೀಕಿಯವರ ರಾಮಾಯಣ ಕಾವ್ಯ ಇಂದಿನ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯಾಗಿದೆ ಎಂದು ವಾಲ್ಮೀಕಿ ಜನಾಂಗದ ತಾಲೂಕು ಅಧ್ಯಕ್ಷ ಪಿ.ಟಿ.ಸುರೇಶ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪೊನ್ನಂಪೇಟೆಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರೇಶ್ ಅವರು ವಾಲ್ಮೀಕಿ ಜನಾಂಗದವರು ಏಳಿಗೆಯನ್ನು ಕಾಣಬೇಕಾದರೆ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು. ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವದಾಸ್ ಅವರು ಮಹರ್ಷಿ ವಾಲ್ಮೀಕಿಯ ಕುರಿತು ಉಪನ್ಯಾಸ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಪೊನ್ನಂಪೇಟೆಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದೇವರಾಜ್, ಗಿರಿಜನ ವಿಸ್ತರಣಾಧಿಕಾರಿ ಎನ್.ಬಿ.ನವೀನ್, ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಎಚ್.ಕೆ.ಪೊನ್ನು, ತಾಲೂಕು ಪಂಚಾಯಿತಿ ಸದಸ್ಯ ಪ್ರಕಾಶ್, ರೆವಿನ್ಯೂ ಇನ್ಸ್‍ಪೆಕ್ಟರ್ ಪಳಂಗಪ್ಪ ಉಪಸ್ಥಿತರಿದ್ದರು. ಶಿಕ್ಷಕ ಎ.ವಿ.ಮಂಜುನಾಥ್ ಸ್ವಾಗತಿಸಿ, ನಿರೂಪಿಸಿದರು.