ಗುಡ್ಡೆಹೊಸೂರು, ಅ. 13: ಇಲ್ಲಿಗೆ ಸಮೀಪದ ಮಾದಪಟ್ಟಣದ ಸರಕಾರಿ ಪಾಲಿಟೆಕ್ನಿಕ್‍ನ ಅಂತಿಮ ವರ್ಷದ ವಿದ್ಯಾರ್ಥಿಗಳು ಮಳೆಗೆ ಮನೆಗಳಿಗೆ ನೀರು ನುಗ್ಗಿದ ಮಾದಪಟ್ಟಣ ಮತ್ತು ಕುಶಾಲನಗರದ ಪ್ರದೇಶಗಳಿಗೆ ಮನೆಮನೆಗೆ ಭೇಟಿ ನೀಡಿ ಡೆಂಗ್ಯೂ, ಮಲೇರಿಯಾದ ಮತ್ತು ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿದರು.

ಅಲ್ಲದೆ ರೋಗಗಳು ಹರಡದಂತೆ ಅನುಸರಿಸುವ ವಿಧಾನಗಳನ್ನು ಮನೆ ಮನೆಗಳಿಗೆ ಭೇಟಿ ನೀಡಿ ತಿಳಿಸಲಾಯಿತು. ತಂಡದಲ್ಲಿ ಕಾಲೇಜಿನ ಅಂತಿಮ ವರ್ಷದ ಸಿವಿಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಲ್ಲದೆ ಗುಡ್ಡೆಹೊಸೂರು ಗ್ರಾ.ಪಂ.ಸದಸ್ಯೆ ಪುಷ್ಪ ಮತ್ತು ಹಲವು ಗ್ರಾಮಸ್ಥರು ಈ ಕಾರ್ಯಕ್ಕೆ ಕೈ ಜೋಡಿಸಿದ್ದರು.