ನಾಪೆÇೀಕ್ಲು, ಅ. 14: ಜನಸಂಖ್ಯಾ ನಿಯಂತ್ರಣಕ್ಕೆ ಸರಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡು ಶ್ರಮಿಸುತ್ತಿದೆ. ಆದರೂ ಗ್ರಾಮೀಣ ಪ್ರದೇಶದಲ್ಲಿ ಇದರ ಬಗ್ಗೆ ಅರಿವು ಕಡಿಮೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇವರಿಗೆ ಅರಿವು ಮೂಡಿಸುವ ಕೆಲಸವನ್ನು ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಆದರೂ ಇದು ನಿರೀಕ್ಷಿತ ಗುರಿ ಮುಟ್ಟಿಲ್ಲ ಎಂಬದು ಅಧಿಕಾರಿಗಳ ಅಭಿಪ್ರಾಯ. ಇದೆಲ್ಲದರ ನಡುವೆ ನಾಪೆÇೀಕ್ಲುವಿನಂತಹ ಗ್ರಾಮೀಣ ಪ್ರದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ 150 ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರಗಳಲ್ಲಿ ಸುಮಾರು 1500 ಜನಕ್ಕೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ ಕೀರ್ತಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ನವೀನ್ ಅವರದ್ದಾಗಿದೆ.
ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಾಪೆÇೀಕ್ಲು ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಡಾ. ನವೀನ್ ಈ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನ ಸಂಖ್ಯಾ ನಿಯಂತ್ರಣದಿಂದ ಮಾತ್ರ ದೇಶದ ಅಭಿವೃದ್ಧಿ, ಏಳಿಗೆ ಸಾಧ್ಯ. ಎಲ್ಲರೂ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ಜಗದೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಫಲಾನುಭವಿಗಳಿಗೆ ನೀಡಲಾದ ಕಿಟ್ ವಿತರಿಸಿದರು.
ಅಧ್ಯಕ್ಷತೆಯನ್ನು ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂವಯ್ಯ ವಹಿಸಿದ್ದರು ವೇದಿಕೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್‍ನ ಸದಸ್ಯರಾದ ಕಾರ್ಯಪ್ಪ, ಕುಲ್ಲೇಟಿರ ಅಜೀತ್ ನಾಣಯ್ಯ, ಶುಶ್ರೂಷಕಿ ಜಲಜಾಕ್ಷಿ ಮತ್ತಿತರರಿದ್ದರು.
-ಪಿ.ವಿ. ಪ್ರಭಾಕರ್