ಗೋಣಿಕೊಪ್ಪಲು, ಅ. 14: ಅಧಿಕಾರಿಗಳು ತಾಲೂಕಿನ ಅಭಿವೃದ್ಧಿಯ ಬಗ್ಗೆ ವಿಶೇಷ ಗಮನ ಹರಿಸಿ ಸರ್ಕಾರದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದರು. ಪೆÇನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. 5 ತಿಂಗಳಲ್ಲಿ ವಾರ್ಷಿಕ ಅವಧಿ ಮುಗಿಯಲಿದೆ. ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಗಳು ಪೂರ್ಣ ಹಂತಕ್ಕೆ ಬಂದಿದೆ. ಇನ್ನುಳಿದ ಕಾಮಗಾರಿಗಳು ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಒದಗಿಸಲಾಗಿದೆ. ಕಾಮಗಾರಿಗಳಿಗೆ ನೀಡಿರುವ ಅನುದಾನವನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ಸದ್ಬಳಕೆ ಯಾಗಬೇಕು. ಅನುದಾನ ಸರ್ಕಾರಕ್ಕೆ ಹಿಂದಿರುಗದಂತೆ ವ್ಯವಸ್ಥೆಗೆ ಪೂರಕವಾಗಿ ಸಹಕರಿಸಬೇಕು ಎಂದು ಸಲಹೆ ನೀಡಿದರು. ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪಂಚಾಯಿತಿ ಗ್ರಾಮೀಣ ಅಭಿವೃದ್ಧಿ, ಕೃಷಿ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಬಾಡಿಗೆ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದರೆ ಅಂತಹ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವದು. ಈ ಬಗ್ಗೆ ಮಾಹಿತಿ ನೀಡುವಂತೆ ಶಾಸಕರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿ ಸೀತಾಲಕ್ಷ್ಮಿಯವರಿಗೆ ತಿಳಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ತಾಲೂಕಿನಲ್ಲಿ 20 ಅಂಗನವಾಡಿ ಕೇಂದ್ರಗಳು

(ಮೊದಲ ಪುಟದಿಂದ) ಬಾಡಿಗೆ ಕಟ್ಟದಲ್ಲಿವೆ ಎಂದು ಮಾಹಿತಿ ನೀಡಿದರು. ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ನಿರ್ಮಿಸಲು ಅನುಕೂಲ ಕಲ್ಪಿಸಿಕೊಡಬೇಕೆಂದು ಬಿ.ಇ.ಓ. ಅವರಿಗೆ ಶಾಸಕರು ಸೂಚಿಸಿದರು.

ಭತ್ತ ಬೆಳೆಯದವರಿಗೆ ಹಣ ಬರುತ್ತಿದೆ. ಬೆಳೆದ ರೈತನಿಗೆ ಪರಿಹಾರದ ಹಣ ಬರುತ್ತಿಲ್ಲ. ಈ ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿ ಖುದ್ದು ಪರಿಶೀಲನೆ ನಡೆಸಬೇಕು ಎಂದು ಶಾಸಕರು ತಿಳಿಸಿದರು.

ಮೀನುಗಾರಿಕೆ ಇಲಾಖೆಯ ಅಧಿಕಾರಿ ಪ್ರಿಯ ಈ ಬಾರಿ 7,39,000 ಮೀನು ಮರಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಯತಿರಾಜ್ ಅವರು ತಾಲೂಕಿನಲ್ಲಿ 74 ಜನ ಟಿಬಿ ರೋಗಪೀಡಿತರಾಗಿದ್ದು, ಇವರಿಗೆ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಔಷಧಿಯೊಂದಿಗೆ ಇವರ ಚಿಕಿತ್ಸೆಗೆ 500 ರೂಪಾಯಿ ಮಾಸಿಕ ಹಣ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮಳೆಯ ತೀವ್ರತೆಯಿಂದ ತಾಲೂಕಿನಲ್ಲಿ 98 ಶಾಲೆಗಳು ಶಿಥಿಲಾವಸ್ಥೆಗೆ ಬಂದಿದ್ದು, ದುರಸ್ತಿಯ ಹಂತದಲ್ಲಿದೆ. 1500 ಸೈಕಲ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಅಲ್ಲದೇ ಪ್ರಸ್ತುತ ವರ್ಷದಲ್ಲಿ ಮಾರ್ಗೊಲ್ಲಿ ಶಾಲೆ ಮತ್ತು ಉರ್ದು ಶಾಲೆಯನ್ನು ವಿದ್ಯಾರ್ಥಿಗಳ ಕೊರತೆ ಯಿಂದ ಮುಚ್ಚಲಾಗಿದೆ ಎಂದು ಮಾಹಿತಿ ನೀಡಿದರು. ಸೈಕಲ್‍ಗಳ ಬಿಡಿಭಾಗಗಳು ಕಳಪೆ ಮಟ್ಟದಿಂದ ಕೂಡಿದ್ದು, ಇದನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಸೂಚಿಸಿದರು. ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಅಧೀನದಲಿರುವ ವಾಲ್ಮೀಕಿ ಭವನ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ. ಈ ಬಗ್ಗೆ ಅಧಿಕಾರಿ ಗಮನ ಹರಿಸಬೇಕೆಂದು ಜಿ.ಪಂ. ಸದಸ್ಯ ಅಚ್ಚಪಂಡ ಮಹೇಶ್ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ರುವ ಅಂಬೇಡ್ಕರ್ ಭವನಗಳು ನಿರ್ವಹಣೆಯಾಗುತ್ತಿಲ್ಲ. ಭವನಗಳನ್ನು ಗ್ರಾಮ ಪಂಚಾಯಿತಿಗೆ ಒಪ್ಪಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಪಂಚಾಯಿತಿ ಗಳು ಗಮನಹರಿಸಬೇಕು ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಗಮನ ಸೆಳೆದರು.

ತೋಟಗಾರಿಕೆ ಇಲಾಖೆ ಅಧಿಕಾರಿ ಡೀನಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೀತಿ, ಅಕ್ಷರ ದಾಸೋಹ ಅಧಿಕಾರಿ ರಾಜೇಶ್ ಮತ್ತು ಹಿಂದುಳಿದ ವರ್ಗ, ಗ್ರಾಮೀಣ ಕುಡಿಯುವ ನೀರು, ಅಬಕಾರಿ, ಪಶುಸಂಗೋಪನೆ, ಲೋಕೋಪಯೋಗಿ, ಚೆಸ್ಕಾಂ, ಸಹಕಾರಿ ಇಲಾಖೆ, ಕಾರ್ಮಿಕ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಇಲಾಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ. ಸದಸ್ಯರುಗಳಾದ ವಿಜು ಸುಬ್ರಮಣಿ, ಶಶಿ ಸುಬ್ರಮಣಿ, ಅಪ್ಪಡೇರಂಡ ಭವ್ಯ, ತಾ.ಪಂ. ಅಧ್ಯಕ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್, ಸ್ಥಾಯಿ ಸಮಿತಿ ಅಧ್ಯಕ್ಷ ಜನೀತ್, ತಾ.ಪಂ. ಸದಸ್ಯರುಗಳಾದ ಜಯಾ ಪೂವಯ್ಯ, ಪ್ರಕಾಶ್, ಗಣೇಶ್, ಆಶಾ ಜೇಮ್ಸ್, ಕುಟ್ಟಂಡÀ ಅಜಿತ್, ಸೀತಮ್ಮ ಸೇರಿದಂತೆ ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಷಣ್ಮುಗಂ ಹಾಜರಿದ್ದರು.

ಚಿತ್ರ, ವರದಿ: ಎನ್.ಎನ್. ದಿನೇಶ್