ಮಡಿಕೇರಿ, ಅ. 14: ಸ.ಪ್ರ. ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರಿಯವರ 115ನೇಯ ಜನ್ಮ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ಪ್ರಾಧ್ಯಾಪಕ ಪ್ರೊ. ಶಶಿಧರ್ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ದಯಾನಂದ ಕೆ.ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು.