ಮಡಿಕೇರಿ, ಅ. 14: ನೆಹರು ಯುವ ಕೇಂದ್ರ ಮತ್ತು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನಡೆದ “ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ” ಎಂಬ ತಾಲೂಕುಮಟ್ಟದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಬೋಪಯ್ಯ ಯುವಜನರು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರೆ ತಮ್ಮ ಕಾರ್ಯ ಚಟುವಟಿಕೆಗಳನ್ನು ನಿಷ್ಠೆಯಿಂದ ಮಾಡಬೇಕು.

ನಾವು ದೇಶದ ರಕ್ಷಣೆಗೆ ಮುಂದಾಗಬೇಕು. ಇಂದಿನ ಯುವಕರು ಮೊಬೈಲ್ ಬಳಕೆಯಲ್ಲಿ ತೊಡಗಿಕೊಂಡಿದ್ದು, ರಾಷ್ಟ್ರ ಭಕ್ತಿಯನ್ನು ಕಳೆದುಕೊಂಡಿದ್ದಾರೆ ಅಲ್ಲದೆ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸೋತಿದ್ದಾರೆ. ಭಾರತದಲ್ಲಿ ಮಾನವ ಸಂಪನ್ಮೂಲ, ಅರಣ್ಯ ಸಂಪತ್ತು, ಖನಿಜ ಸಂಪತ್ತು, ಭೂ ಸಂಪತ್ತು ಹೆಚ್ಚಾಗಿದೆ ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂಬದನ್ನು ತಿಳಿಯುತ್ತಿಲ್ಲ. ಯುವಜನರು ಹೃದಯದಲ್ಲಿ ಪ್ರೀತಿ ಬೆಳೆಸಿಕೊಂಡು ನನ್ನಿಂದ ಎಲ್ಲವೂ ಸಾಧ್ಯ ಎಂಬ ಸಾಧಿಸುವ ಛಲ ಇಟ್ಟುಕೊಂಡು ರಾಷ್ಟ್ರ ಏಳಿಗೆಗೆ ದುಡಿದಾಗ ಮಾತ್ರ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ತಿಳಸಿದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್, ಕಾರ್ಯದರ್ಶಿ ಜಿ.ಆರ್. ಸುಮಾ, ಕಾಲೇಜಿನ ಐ.ಕೂ.ಎ.ಸಿ ಸಂಚಾಲಕರಾದ ರಾಖಿ ಪೂವಣ್ಣ, ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಂಯೋಜಕರಾದ ಸಂತೋಷ್, ಮೇರಿ, ವಿನಯ್, ಧನಲಕ್ಷಿ ಕಾರ್ಯಕ್ರಮದ ಯೋಜನಾಧಿಕಾರಿ ಎಂ.ಎನ್. ವನಿತ್ ಕುಮಾರ್ ಉಪಸ್ಥಿತರಿದ್ದರು. ತಾಲೂಕು ಮಟ್ಟದ ಈ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಎಂ.ಕೆ. ಹಷಿತಾ ಮತ್ತು ಡಿ.ಕೆ. ಮೊನೀಷ, ವೀರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿ ಆರ್. ಕವನ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.