ಕೂಡಿಗೆ, ಅ. 14 : ಹುದುಗೂರು ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಂಡೆಬೆಟ್ಟದಲ್ಲಿರುವ ಚೌಡಿ ದೇವಿ ಪೂಜೋತ್ಸವ ಕಾರ್ಯಕ್ರಮವು ದೇವಾಲಯ ಸಮಿತಿಯ ವತಿಯಿಂದ ನೆರವೇರಿತು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆಗಳು ನಂತರ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆದವು. ಪೂಜೆ ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ. ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ನಿದೇರ್ಶಕರು ಹಾಗೂ ಗ್ರಾಮದ ನೂರಾರು ಭಕ್ತಾದಿಗಳು ಭಾಗವಹಿಸಿದರು.