ಚೆಟ್ಟಳ್ಳಿ, ಅ. 14: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ ಬೃಹತ್ ಮೀಲಾದ್ ಸಮಾವೇಶ ನವೆಂಬರ್ 8 ರಂದು ಸಂಜೆ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ. ಶಿಕ್ಷಣ ತಜ್ಞರೂ ಆದ ಬದ್ರುಸ್ಸಾದಾತ್ ಸಯ್ಯದ್ ಖಲೀಲುಲ್ ಬುಖಾರಿ ತಂಙ್ಞಳ್ ಸೇರಿದಂತೆ ಹಲವು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ನಾಯಕರುಗಳು ಭಾಗವಹಿಸಲಿದ್ದಾರೆ.