ಸಿದ್ದಾಪುರ, ಅ.14: ಎಡಪಕ್ಷಗಳ ಜಂಟಿ ಆಶ್ರಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿದ್ದಾಪುರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕೇಂದ್ರ ಸರ್ಕಾರವು ನೆರೆ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದ ಮೂಲಕ ಪರಿಹಾರವನ್ನು ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು ಸಿಪಿಐಎಂ ಪಕ್ಷದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಜಮಾಯಿಸಿದರು.
ಸಿಪಿಐಎಂ ಪಕ್ಷದ ಮುಖಂಡರಾದ ರಮೇಶ್ ಕುಟ್ಟಪ್ಪ, ಪದಾಧಿಕಾರಿಗಳಾದ ಮುಸ್ತಫಾ, ಅನಿಲ್ ಸಾಲಿ ಪೌಲೋಸ್ ಹಾಗೂ ಇತರರು ಹಾಜರಿದ್ದರು.