ಮಡಿಕೇರಿ, ಅ. 14: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮಥ್ರ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದ್ದಾರೆ. ಯುವ ಜನಸೇವಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ಇದ್ದರು.