ಕುಶಾಲನಗರ, ಅ. 15: ವಾಯು ವಿಹಾರಕ್ಕೆ ತೆರಳಿದ ಸಂದರ್ಭ ವಾಹನ ಅಪಘಾತಕ್ಕೀಡಾಗಿ ತೀವ್ರ ಅಸ್ವಸ್ಥಗೊಂಡು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲನಗರದ ನಿವಾಸಿ ಕೊಡಗನ ರಮೇಶ್ (74) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಕುಶಾಲನಗರ ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿಯ ನಿವಾಸಿ ರಮೇಶ್ ಕೆಲವು ದಿನಗಳ ಹಿಂದೆ ಮಾರುಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಹಿಂದಿನಿಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ತಾ. 16 ರಂದು (ಇಂದು) ಕುಶಾಲನಗರದ ಕೊಪ್ಪ ಗೇಟ್ ಬಳಿಯ ಜಮೀನಿನಲ್ಲಿ ನಡೆಯಲಿದೆ. ಮೃತರು ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾರೆ.