ಒಡೆಯನಪುರ, ಅ. 15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 16 ರಿಂದ 23 ವರೆಗೆ ಕೊಡ್ಲಿಪೇಟೆಯಲ್ಲಿ 1418ನೇ ಮದ್ಯವರ್ಜನ ಶಿಬಿರ ನಡೆಯಲಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರಪೇಟೆ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ರಾಜ್ಯ ಜನ ಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದÀ್ಯಪಾನ ಸಂಯಮ ಮಂಡಳಿ, ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆ, ಕೊಡ್ಲಿಪೇಟೆ ಕಿರಿಕೊಡ್ಲಿ ಗುರು ಸಿದ್ದಸ್ವಾಮಿ ವಿದ್ಯಾಪೀಠ, ಕೊಡ್ಲಿಪೇಟೆ ಮಧ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೊಡ್ಲಿಪೇಟೆ ವಲಯ ಒಕ್ಕೂಟ ಹಾಗೂ ಸೋಮವಾರಪೇಟೆ ತಾಲೂಕು ನವಜೀವನ ಸಮಿತಿಗಳು ಮತ್ತು ಕೊಡ್ಲಿಪೇಟೆಯ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮದ್ಯವರ್ಜನ ಶಿಬಿರವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಗುರು ಸಿದ್ದಸ್ವಾಮಿ ವಿದ್ಯಾಪೀಠದ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ತಾ. 16 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ಶಿಬಿರ ನಡೆಯಲಿದ್ದು, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮದÀ್ಯವರ್ಜನ ಶಿಬಿರವನ್ನು ಉದ್ಘಾಟಿಸಲಿದ್ದು, ಮದÀ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಎಸ್. ವರಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಸಿ.ಪಿ. ಪುಟ್ಟರಾಜು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಎ. ಯೋಗೇಶ್, ತಾ.ಪಂ. ಅಧ್ಯಕ್ಷೆ ಪುಷ್ಪ ರಾಜೇಶ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾ ಘಟಕದ ಸದಸ್ಯ ಡಿ. ಭಗವಾನ್, ಜಿಲ್ಲಾ ಉಪಾಧ್ಯಕ್ಷ ಚಂದ್ರಮೋಹನ್, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ರೋಹಿಣಿ ಸುಬ್ರಮಣ್ಯ, ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ನಿರ್ಮಲಾ ಸುಂದರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ತಾ. 23 ರಂದು ನಡೆಯಲಿರುವ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭವನ್ನು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು ಕಲ್ಲಳಿ ಮಠದ ರುದ್ರಮುನಿ ಮಹಾಸ್ವಾಮೀಜಿ, ಕಲ್ಲುಮಠದ ಮಹಂತಸ್ವಾಮೀಜಿ ಆಶೀರ್ವಚನ ನೀಡಲಿರುವರು. ಸಮಾರೋಪ ಕಾರ್ಯಕ್ರಮದಲ್ಲಿ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಸತೀಶ್ ಹೊನ್ನವಳ್ಳಿ, ಕೊಡಗು ಜಿಲ್ಲಾ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ ಮುಂತಾದವರು ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.